ಮಂಗಳಮುಖಿಯರಿಗೂ ಗೃಹಲಕ್ಷ್ಮಿ : ಸರ್ಕಾರದ ಗುಡ್ ನ್ಯೂಸ್

| Published : Jul 06 2024, 11:39 AM IST

transgender
ಮಂಗಳಮುಖಿಯರಿಗೂ ಗೃಹಲಕ್ಷ್ಮಿ : ಸರ್ಕಾರದ ಗುಡ್ ನ್ಯೂಸ್
Share this Article
  • FB
  • TW
  • Linkdin
  • Email

ಸಾರಾಂಶ

ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. 

ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್‌ ಅನ್ನು ಕಡ್ಡಾಯವಾಗಿ ನೀಡಬೇಕಾದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ತಿಳಿಸಿದೆ.