ವಾರದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ - ನಾನು ವಿಶ್ರಾಂತಿಯಲ್ಲಿದ್ದ ಕಾರಣ ಸ್ವಲ್ಪ ವಿಳಂಬವಾಯಿತು : ಸಚಿವೆ ಲಕ್ಷ್ಮೀ

| N/A | Published : Feb 22 2025, 10:00 AM IST

Lakshmi hebbalkar
ವಾರದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ - ನಾನು ವಿಶ್ರಾಂತಿಯಲ್ಲಿದ್ದ ಕಾರಣ ಸ್ವಲ್ಪ ವಿಳಂಬವಾಯಿತು : ಸಚಿವೆ ಲಕ್ಷ್ಮೀ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಗೃಹಲಕ್ಷ್ಮೀ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆ ಶಿಶು ಯೋಜನಾಭಿವೃದ್ಧಿ ಅಧಿಕಾರಿ (ಸಿಡಿಪಿಒ) ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ನಂತರ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ವಿವರಿಸಿದರು.

‘ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿ ಇದ್ದುದರಿಂದ ಹಣ ಸಂದಾಯ ಸ್ವಲ್ಪ ವಿಳಂಬವಾಯಿತು. ಈಗಾಗಲೇ ಹಣ ಬಿಡುಗಡೆಗೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ’ ಎಂದು ಹೆಬ್ಬಾಳ್ಕರ್‌ ತಿಳಿಸಿದರು. ವಿರೋಧ ಪಕ್ಷದವರಿಗೆ ಟೀಕೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ.‌ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ತಿರುಗೇಟು ನೀಡಿದರು.

ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಕ್ಕೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿತ್ತು. 

ಮಾಡಲು ಅಸ್ತ್ರ ಸಿಕ್ಕಂತಾಗಿತ್ತು. ವಿಪಕ್ಷ ನಾಯಕರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಕಣ್ಣಿಗೆ ಮಣ್ಣೆರಚುವ ಯೋಜನೆಗಳೆಂದು ಎಂದು ಟೀಕಾಪ್ರಹಾರ ನಡೆಸುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ವಿಳಂಬಕ್ಕೆ ಕಾರಣ ನೀಡಿದರು.