ಬಿಪಿಎಲ್‌ ಕಾರ್ಡ್‌ದಾರರಿಗೆ ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಹೃದಯ, ಶ್ವಾಸಕೋಶ, ಮೂಳೆ ಕಸಿಯೂ ಲಭ್ಯ

| N/A | Published : Jan 30 2025, 10:21 AM IST

Ration card
ಬಿಪಿಎಲ್‌ ಕಾರ್ಡ್‌ದಾರರಿಗೆ ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಹೃದಯ, ಶ್ವಾಸಕೋಶ, ಮೂಳೆ ಕಸಿಯೂ ಲಭ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

  ಬೆಂಗಳೂರು : ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ. 

ಜ.16 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2018ರಿಂದ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗಾಗಿ (ಆದ್ಯತಾ ವಲಯ) ಜಾರಿಯಲ್ಲಿರುವ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿ ಸೇರಿಸಲು ನಿರ್ಧಾರ ಮಾಡಲಾಗಿತ್ತು. 

ಇದರಡಿ ಯೋಜನೆ ವಿಸ್ತರಣೆ ಮಾಡಿ ಅಂಗಾಂಗ ಕಸಿ, ಇಮ್ಯುನೋಸಪ್ರೆಶನ್‌ ಔಷಧಿಗಳ ಖರೀದಿಯನ್ನು ಅತಿ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ವಿಧಾನಗಳ ಯೋಜನೆಯಲ್ಲಿ ವ್ಯಾಖ್ಯಾನಿಸಲಾದ ಷರತ್ತುಗಳ ಅನ್ವಯ ಅನುಷ್ಠಾನಗೊಳಿಸಲು ಬುಧವಾರ ಆದೇಶ ಹೊರಡಿಸಲಾಗಿದೆ.