ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ

| N/A | Published : May 03 2025, 10:10 AM IST

Rain Alert In Bihar
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರೆದಿದೆ. ಗುಡುಗು ಸಿಡಿಲು ಮಿಂಚಿನ ಸಮೇತ ವಿವಿಧೆಡೆ ಭರ್ಜರಿ ಮಳೆಯಾಗಿದೆ.

 ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರೆದಿದೆ. ಗುಡುಗು ಸಿಡಿಲು ಮಿಂಚಿನ ಸಮೇತ ವಿವಿಧೆಡೆ ಭರ್ಜರಿ ಮಳೆಯಾಗಿದೆ.

ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಶುಕ್ರವಾರ ಹಲವೆಡೆ ಮಳೆಯಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರವೂ ಸಿಡಿಲಬ್ಬರದ ಧಾರಾಕಾರ ಮಳೆ ಮುಂದುವರೆದಿದ್ದು, ಮಳೆ ನೀರು ರಸ್ತೆಯಲ್ಲಿ ನಿಂತು ಹಾಗೂ ಮರದ ರೆಂಬೆಕೊಂಬೆಗಳು ಬಿದ್ದ ಹಿನ್ನೆಲೆಯಲ್ಲಿ ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ಜನ ಸಾಮಾನ್ಯರು ಪರದಾಡಬೇಕಾಯಿತು. ನಗರದ ನ್ಯಾಷನಲ್‌ ಕಾಲೇಜು ಬಳಿಯಲ್ಲಿ ಬೃಹತ್‌ ಮರ ಕಾರಿನ ಮೇಲೆ ಬಿದ್ದು, ಕಾರು ಜಖಂಗೊಂಡಿದೆ. ಬಿದ್ದ ಮರ ತೆರವು ಮಾಡಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ರಾತ್ರಿ 8 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಮರ ಸಂಪೂರ್ಣವಾಗಿ ಧರೆಗೆ ಬಿದ್ದಿವೆ. ಅದರೊಂದಿಗೆ 95ಕ್ಕೂ ಅಧಿಕ ಮರದ ರೆಂಬೆ-ಕೊಂಬೆಗಳು ಬಿದ್ದ ವರದಿಯಾಗಿದೆ.

ಚಿಕ್ಕಮಗಳೂರು ಜಿಲ್ಲಾದ್ಯಂತ ಶುಕ್ರವಾರ ಸುಮಾರು 2 ಗಂಟೆಗಳ ಕಾಲ ಧಾರಾಕಾರವಾಗಿ ಮಳೆಯಾಗಿದೆ. ಮಳೆಗೆ

ರಸ್ತೆಯೆಲ್ಲಾ ಜಲಾವೃತ್ತವಾಗಿದ್ದು, ವಾಹನ ಸಂಚಾರರು ಪರಾದಾಡುವಂತಾಗಿತ್ತು.