ಸಾರಾಂಶ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಆ.18ರಂದು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾಸನ ಮತ್ತು ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ.19ರಂದು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮುಂದುವರೆಸಲಾಗಿದೆ.
ರಾಜ್ಯದಲ್ಲಿ ಸದ್ಯಕ್ಕೆ ಮಳೆ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಆ.22ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಆ.17ಕ್ಕೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಉಳಿದಂತೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕಲಬುರಗಿ, ಕೊಪ್ಪಳ, ಬೀದರ್, ಗದಗ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.