ಸಾರಾಂಶ
ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.
ಬೆಂಗಳೂರು: ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.
ಯಾದಗಿರಿ ಜಿಲ್ಲೆಯ ನಿರಂತರ ಮಳೆ
ಯಾದಗಿರಿ ಜಿಲ್ಲೆಯ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದ್ದು, ಶಹಾಪುರ ತಾಲೂಕಿನ ಹಲವು ಗ್ರಾಮದ ರಸ್ತೆಗಳು ಕೆರೆಯಂತೆ ಮಾರ್ಪಟ್ಟಿವೆ. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಸುಂಟಿಕೊಪ್ಪ, ಸಿದ್ದಾಪುರ, ವಿರಾಜಪೇಟೆ ಸೇರಿ ಹಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಕಾಫಿ ಹಾಗೂ ಕಾಳು ಮೆಣಸು ಬೆಳೆಗಾರರು ಆತಂಕಗೊಂಡಿದ್ದಾರೆ.
ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು
ಅಲ್ಲದೇ ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ತುಮಕೂರು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಜತೆಗೆ ಶೀತಗಾಳಿಯೂ ಬೀಸುತ್ತಿರುವ ಪರಿಣಾಮ ಸೋಮವಾರ ಜನರು ಹೊರಬರದೆ ರಸ್ತೆಗಳು ಬಿಕೋ ಎನ್ನುತ್ತಿತ್ತು.
;Resize=(690,390))
)
)
;Resize=(128,128))
;Resize=(128,128))
;Resize=(128,128))