ಸಾರಾಂಶ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆಯಿದ್ದು, 15ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜು. 31ರವರೆಗೆ ಮುಂದುವರಿಯಲಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಬ್ಬರ ಹೆಚ್ಚಿರಲಿದೆ.
ಹಾಸನ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಸೇರಿ ಇತರೆ ಜಿಲ್ಲೆಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಜತೆಗೆ ಭಾರೀ ಗಾಳಿಯೂ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.