ಇಂದು, ನಾಳೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ? ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

| Published : Aug 17 2024, 06:53 AM IST

tamilnadu rain

ಸಾರಾಂಶ

ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

 ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 12 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ಆ.17 ಹಾಗೂ 18ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ರಾಜ್ಯದಲ್ಲಿ ಆ.21ರ ವರೆಗೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಕೊಪ್ಪಳದ ತಾವರಗೇರೆಯಲ್ಲಿ ಅತಿ ಹೆಚ್ಚು 8 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಗಂಗಾವತಿಯಲ್ಲಿ 7, ಧರ್ಮಸ್ಥಳ, ರೋಣದಲ್ಲಿ ತಲಾ 5, ಬೆಳ್ತಂಗಡಿ, ಬಾದಮಿ, ತ್ಯಾಗರ್ತಿಯಲ್ಲಿ ತಲಾ 4, ಪುತ್ತೂರು, ಮೂರ್ನಾಡು, ಅಜ್ಜಂಪುರದಲ್ಲಿ ತಲಾ 3, ಕುಡುತಿನಿ, ಬನವಾಸಿ, ಮಾಣಿ, ಪಣಂಬೂರು, ಸಿದ್ದಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾದ ವರದಿಯಾಗಿದೆ.