ಸಾರಾಂಶ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಎಚ್ಚರಿಕೆ:
ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿದೆ. ಸಮುದ್ರದಲ್ಲಿ ಅಲೆ ಅಬ್ಬರ ಹೆಚ್ಚಿದೆ. ಗಾಳಿಯು ಗಂಟೆಗೆ 35ರಿಂದ 65 ಕಿ.ಮೀ.ವರೆಗೆ ಬೀಸುತ್ತಿದೆ. 3 ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.