ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್‌ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್‌ ಪರಿಶೀಲಿಸಿ ಹೈಕೋರ್ಟ್‌

| Published : Nov 21 2024, 09:46 AM IST

Karnataka highcourt

ಸಾರಾಂಶ

ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್‌ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್‌ ಜಾರಿಗೆ ನಿರಾಕರಿಸಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಬೆಳ್ತಗಂಡಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಬೆಂಗಳೂರು: ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್‌ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್‌ ಜಾರಿಗೆ ನಿರಾಕರಿಸಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಬೆಳ್ತಗಂಡಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳ ಸಂಬಂಧ ವಿಚಾರಣೆಗೆ ಒಳಪಡಿಸಲು ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್ ಜಾರಿ ಕೋರಿ ಈ ಹಿಂದೆ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಇದು ತನ್ನ ವ್ಯಾಪ್ತಿಗೆ ಬರದು ಎಂದು ಹೇಳಿ ಬಾಡಿ ವಾರೆಂಟ್‌ ಜಾರಿಗೆ ಅಧೀನ ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆ ಪೊಲೀಸರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಪೊಲೀಸರ ಪರ ವಾದ ಮಂಡಿಸಿ ಮನವಿ ಸಲ್ಲಿಸಿದರು. ಈ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌, ಪೊಲೀಸರ ಮನವಿಯನ್ನು ಪರಿಶೀಲಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದೆ.

‘ ನಕ್ಸಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಕೇರಳ ಪೊಲೀಸರಿಂದ ಸಾವಿತ್ರಿ ಅಲಿಯಾಸ್‌ ಉಷಾ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಆಕೆ ಕೇರಳದ ತ್ರಿಶ್ಯೂರ್ ಜೈಲಿನಲ್ಲಿದ್ದಾರೆ.

ಆದರೆ, 2012ರಲ್ಲಿ ಬೆಳ್ತಂಗಡಿಯ ವೇಣೂರು ಪೊಲೀಸ್‌ ರಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ಸಂಬಂಧ ಸಾವಿತ್ರಿಯನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಆಕೆ ವಿರುದ್ಧ ಬಾಡಿ ವಾರೆಂಟ್‌ ಜಾರಿಗೊಳಿಸಲು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಅಧೀನ ನ್ಯಾಯಾಲಯವು 2022ರ ಜೂ.22ರಂದು ಆದೇಶಿಸಿದೆ. ಆ ಆದೇಶವನ್ನು ರದ್ದುಪಡಿಸಬೇಕು. ಸರ್ಕಾರದ ಮನವಿಯನ್ನು ಮರು ಪರಿಶೀಲಿಸಲು ಅಧೀನ ನ್ಯಾಯಾಲಯಕ್ಕೆ ಸೂಚಿಸಬೇಕು ಎಂದು ಕೋರಿದರು. ಈ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌, ಪೊಲೀಸರ ಮನವಿಯನ್ನು ಪರಿಶೀಲಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದೆ.

ಬೆಳ್ತಗಂಡಿಯ ಎಸಿಜೆ, ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ