ನಾನು ಚಿನ್ನ ಕದ್ದು ತಂದಿಲ್ಲ: ಸುಳ್ಳು ಕೇಸು ಹಾಕಿ, ಸಿಲುಕಿಸುವ ಯತ್ನ - ಉಲ್ಟಾ ಹೊಡೆದಳು ರನ್ಯಾ

| N/A | Published : Mar 15 2025, 07:57 AM IST

Ranya Gold Case

ಸಾರಾಂಶ

‘ನಾನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಪಾಲ್ಗೊಂಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಕಾರಾಗೃಹದ ಅಧಿಕಾರಿಗಳಿಗೆ ನಟಿ ರನ್ಯಾ ರಾವ್‌ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಬೆಂಗಳೂರು : ‘ನಾನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಪಾಲ್ಗೊಂಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಕಾರಾಗೃಹದ ಅಧಿಕಾರಿಗಳಿಗೆ ನಟಿ ರನ್ಯಾ ರಾವ್‌ ಪತ್ರ ಬರೆದಿದ್ದಾರೆ ಎನ್ನಲಾಗಿದೆ. 

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಡಿಆರ್‌ಐ ಅಧಿಕಾರಿಗಳಿಂದ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರನ್ಯಾ ರಾವ್ ಇದ್ದಾರೆ. ಮೊದಲು ಡಿಆರ್‌ಐ ವಿಚಾರಣೆ ವೇಳೆ ಅಪರಿಚಿತರ ಸೂಚನೆ ಮೇರೆಗೆ ದುಬೈನಿಂದ ಚಿನ್ನ ತಂದಿದ್ದಾಗಿ ಹೇಳಿದ್ದ ಅವರು, ಈಗ ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಉಲ್ಟಾ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ರನ್ಯಾರಾವ್‌ ಅವರ ಪತ್ರವನ್ನು ಡಿಆರ್‌ಐಗೆ ಕಾರಾಗೃಹ ಇಲಾಖೆ ಅಧಿಕಾರಿಗಳು ಕಳುಹಿಸಿದ್ದಾರೆ. ಆದರೆ ಈ ಪತ್ರದ ಕುರಿತು ಕಾರಾಗೃಹ ಇಲಾಖೆ ಅಧಿಕಾರಿಗಳು ಖಚಿತಪಡಿಸಿಲ್ಲ. ನಾನು ದುಬೈಗೆ ರಿಯಲ್ ಎಸ್ಟೇಟ್ ಸಂಬಂಧ ಹೋಗಿದ್ದೆ. ಅಲ್ಲಿಂದ ಮಾ.3 ರಂದು ಮರಳುವಾಗ ನಾನು ಚಿನ್ನ ತಂದಿರಲಿಲ್ಲ. ಆದರೆ ಯಾರನ್ನೋ ರಕ್ಷಿಸುವ ಸಲುವಾಗಿ ನನ್ನನ್ನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಸಂಚು ರೂಪಿಸಿ ಕೆಲವರು ಸಿಲುಕಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಕಾರಾಗೃಹ ಅಧಿಕಾರಿಗಳಿಗೆ ರನ್ಯಾ ಕೋರಿದ್ದಾಳೆ ಎನ್ನಲಾಗಿದೆ.