ಸಾರಾಂಶ
ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರ: ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೆವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬಬಲೇಶ್ವರ ತಾಲೂಕಿನ ಧನ್ಯಾಳದಲ್ಲಿ ಬುಧವಾರ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಮಾಡಿ ಮಾತನಾಡಿದರು. 12ನೇ ಶತಮಾನದಿಂದ 1881ರವರೆಗೆ ಲಿಂಗಾಯಿತ ಪ್ರತ್ಯೇಕ ಧರ್ಮವಾಗಿತ್ತು. ಆದರೆ, 1881ರಲ್ಲಿ ಮೈಸೂರು ಅರಸರು ಲಿಂಗಾಯಿತರನ್ನು ಪ್ರತ್ಯೇಕ ಧರ್ಮದ ಕಾಲಂನಿಂದ ತೆಗೆದು ಹಿಂದೂ ಧರ್ಮದ ಶೂದ್ರ ವರ್ಣದಲ್ಲಿ ಸೇರಿಸಿದರು ಎಂದರು.
ದಯವೇ ಧರ್ಮದ ಮೂಲವಯ್ಯ ಎಂಬ ತಿರುಳು ಹೊಂದಿರುವ ಬಸವ ಧರ್ಮ ಪಾಲನೆಯಾದರೆ ವಿಶ್ವದಲ್ಲಿ ಯುದ್ಧದ ವಾತಾವರಣವೇ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಬಸವ ಭಾರತವಾಗಲಿದೆ. ಆಗ ದೇಶದಲ್ಲಿ ಕಾಯಕ, ದಾಸೋಹ, ಸಮಾನತೆ, ಸಾಮರಸ್ಯ ನೆಲೆಸಲಿದೆ ಎಂದು ಹೇಳಿದರು.