ಸಾರಾಂಶ
ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಪತ್ರದ ಮೂಲಕ ನಿರ್ದೇಶಿಸಿರುವ ಖಂಡ್ರೆ, ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ಮಾನವನ ಹತ್ಯೆ ಮಾಡಿದಂತೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಅಕ್ರಮವಾಗಿ ಕಡಿತಲೆ ಮಾಡುವವರಿಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯವನ್ನೂ ಪ್ರತಿಪಾದಿಸಿದೆ ಎಂದಿದ್ದಾರೆ.
. ಆ ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದಲ್ಲಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣ 10 ಪಟ್ಟು ಹೆಚ್ಚಿಸಬೇಕಿದೆ. ಅದಕ್ಕೆ ಪೂರಕವಾಗಿ ವೃಕ್ಷ ಸಂರಕ್ಷಣಾ ಕಾಯ್ದೆ 1976 ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.