ರಾಜ್ಯದ 30 ಕಡೆ ಐಟಿ ರೇಡ್‌ : ತೆರಿಗೆ ವಂಚನೆ ಮಾಡಿದವರಿಗೆ ಆದಾಯ ತೆರಿಗೆ ಇಲಾಖೆ ಶಾಕ್‌

| N/A | Published : Feb 06 2025, 05:54 AM IST

Income Tax Refund Scam

ಸಾರಾಂಶ

ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್‌ಗಳು, ಗುತ್ತಿಗೆದಾರರು, ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್‌ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರು: ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್‌ಗಳು, ಗುತ್ತಿಗೆದಾರರು, ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್‌ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ಆರಂಭಿಸಿದ ಐಟಿ ಅಧಿಕಾರಿಗಳ ತಂಡವು ತಡರಾತ್ರಿಯವರೆಗೆ ತಪಾಸಣೆ ಮುಂದುವರಿಸಿದೆ. ಗುರುವಾರವು ಸಹ ಶೋಧ ಕಾರ್ಯ ಮುಂದುವರೆಯಲಿದೆ.