ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು-ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು.

 ಇದರಿಂದ ಅಪಘಾತಗಳು ಸಂಭವಿಸುವ ಕುರಿತು ಗ್ರಾಮಸ್ಥರ ಮನವಿ ಮೇರೆಗೆ ಸುರಕ್ಷತಾ ಕ್ರಮವಾಗಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.