ಸಾರಾಂಶ
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘಧ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘಧ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಜೆಪಿ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷದ ಈ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಆರೋಪ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮಿಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರು ಕೆಂಪಣ್ಣ ಮಾಡಿದ್ದರು. ಬಿಜೆಪಿಯವರು ಕಮಿಷನ್ ತೆಗೆದುಕೊಂಡಿರುವುದಾಗಿ ಕೆಂಪಯ್ಯನವರು ಆರೋಪಿಸಿದ್ದರು ಎಂದು ಹೇಳಿದರು.
ನಕ್ಸಲರು ಶರಣಾಗುವ ಸಾಧ್ಯತೆ:
ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನಃಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.