ಸಾರಾಂಶ
ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಾಜ್ಞೆ ಹೊರಡಿಸಿದೆ.
ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಾಜ್ಞೆ ಹೊರಡಿಸಿದೆ.
ಕನ್ನಡದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದರಿಂದ ಕಮಲ್ ಹಾಸನ್‌ಗೆ ನಿರ್ಬಂಧ ಹೇರಬೇಕು ಎಂದು ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ಅಸಲು ದಾವೆಯ ವಿಚಾರಣೆ ನಡೆಸಿದ ನಗರದ 31ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ಆದೇಶ ಹೊರಡಿಸಿದೆ.
ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ನಿರ್ಬಂಧಿಸಲಾಗಿದೆ, ಪ್ರತಿವಾದಿ ಕಮಲ್‌ಹಾಸನ್, ಪ್ರತಿವಾದಿ ಅಥವಾ ಅವರ ಏಜೆಂಟರು, ನಿಯೋಜಕರು, ಪ್ರತಿನಿಧಿಗಳು ಅಥವಾ ಅವರ ಅಡಿ ಅಥವಾ ಅವರ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಈ ತಾತ್ಕಾಲಿಕ ನಿರ್ಬಂಧಕಾಜ್ಞೆ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಅಲ್ಲದೆ, ದಾವೆ ಸಂಬಂಧ ಕಮಲ್ ಹಾಸನ್‌ಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದೆ.