‘ಕನ್ನಡ ಸಂಘ ಬಹರೈನ್‌’ಗೆ ಸರ್ಕಾರದಿಂದ ₹1 ಕೋಟಿ

| N/A | Published : Sep 13 2025, 11:13 AM IST

Siddaramaiah

ಸಾರಾಂಶ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ‘ಕನ್ನಡ ಸಂಘ ಬಹರೈನ್‌’ಗೆ ಒಂದು ಕೋಟಿ ರೂ.ಗಳ ಅನುದಾನ ನೀಡಲು ಅನುಮೋದನೆ ನೀಡಿದ್ದಾರೆ.

 ಬೆಂಗಳೂರು :  ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ‘ಕನ್ನಡ ಸಂಘ ಬಹರೈನ್‌’ಗೆ ಒಂದು ಕೋಟಿ ರೂ.ಗಳ ಅನುದಾನ ನೀಡಲು ಅನುಮೋದನೆ ನೀಡಿದ್ದಾರೆ.

ಸಭಾಪತಿ ಹೊರಟ್ಟಿ ಹಾಗೂ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಕನ್ನಡಿಗರ ವೇದಿಕೆಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಸಮ್ಮುಖದಲ್ಲಿ, ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಗುರುವಾರ ಮುಖ್ಯಮಂತ್ರಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಈ ಮೊತ್ತವನ್ನು ಬಿಡುಗಡೆ ಮಾಡಲು ಶುಕ್ರವಾರ ಅನುಮೋದನೆ ನೀಡಿದ್ದಾರೆ

‘ಕನ್ನಡ ಸಂಘ ಬಹರೈನ್‌’, ಕನ್ನಡ ಭವನ ನಿರ್ಮಿಸಿದ್ದು, ವಿಶ್ವದಲ್ಲೇ ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನ ಎಂಬ ಖ್ಯಾತಿಗೆ ಒಳಗಾಗಿದೆ. ಇತ್ತೀಚೆಗೆ ಹೊರಟ್ಟಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಭವನಕ್ಕೆ ಭೇಟಿ ನೀಡಿ, ಸಂಘದ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ಸಿಎಂ ಅವರ ಈ ಧನಸಹಾಯ, ‘ಕನ್ನಡ ಸಂಘ ಬಹರೈನ್’ಗೆ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ. 

Read more Articles on