ಕರ್ನಾಟಕ ಬಜೆಟ್ 2025 : 2500 ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ - ಪತ್ರಕರ್ತರ ಮಾಸಾಶನ 15 ಸಾವಿರ ರು.ಗೆ

| N/A | Published : Mar 08 2025, 08:26 AM IST

Karnataka Budget
ಕರ್ನಾಟಕ ಬಜೆಟ್ 2025 : 2500 ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ - ಪತ್ರಕರ್ತರ ಮಾಸಾಶನ 15 ಸಾವಿರ ರು.ಗೆ
Share this Article
  • FB
  • TW
  • Linkdin
  • Email

ಸಾರಾಂಶ

ಪತ್ರಕರ್ತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ 5 ಲಕ್ಷ ರು.ವರೆಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಬೆಂಗಳೂರು : ಪತ್ರಕರ್ತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ 5 ಲಕ್ಷ ರು.ವರೆಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ 2,500 ಪತ್ರಕರ್ತರು ಮತ್ತು ಅವರ ಅವಲಂಬಿತ ಸದಸ್ಯರಿಗೆ 5 ಲಕ್ಷ ರು.ವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. 

ಅದರ ಜತೆಗೆ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿದ್ದ 12 ಸಾವಿರ ರು. ಮಾಸಾಶನವನ್ನು 15 ಸಾವಿರ ರು.ಗೆ ಹಾಗೂ ಕುಟುಂಬ ಮಾಸಾಶನವನ್ನು 6 ಸಾವಿರ ರು.ನಿಂದ 7,500 ರು.ವರೆಗೆ ಏರಿಕೆ ಮಾಡುವುದಾಗಿ ತಿಳಿಸಲಾಗಿದೆ.