ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ

| N/A | Published : Jul 16 2025, 08:39 AM IST

Film theater
ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
Share this Article
  • FB
  • TW
  • Linkdin
  • Email

ಸಾರಾಂಶ

ಮಲ್ಟಿಫ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೆ ಏಕರೂಪ ಟಿಕೆಟ್‌ ದರ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ.

  ಬೆಂಗಳೂರು:  ಮಲ್ಟಿಫ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೆ ಏಕರೂಪ ಟಿಕೆಟ್‌ ದರ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ.

ಮನರಂಜನಾ ತೆರಿಗೆ ಒಳಗೊಂಡಂತೆ ಟಿಕೆಟ್‌ ದರ ₹200 ಮೀರದಂತೆ ಕರ್ನಾಟಕ ಸಿನಿಮಾಗಳು (ನಿಯಂತ್ರಣ) ನಿಯಮಗಳು 2014ಕ್ಕೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿ ಕರಡು ಸಂಬಂಧ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳು ಇದ್ದಲ್ಲಿ 15 ದಿನಗೊಳಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಬೇಕು. ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ ತಿದ್ದುಪಡಿ ಕರಡು ಅಧಿಸೂಚನೆ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.

ಮಲ್ಪಿಫ್ಲೆಕ್ಸ್‌ ಸೇರಿ ಕೆಲ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ ಅತ್ಯಂತ ದುಬಾರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಧಿವೇಶನದಲ್ಲಿ ಸಹ ಈ ಬಗ್ಗೆ ಅನೇಕ ಸದಸ್ಯರು ಚರ್ಚಿಸಿ ಏಕರೂಪದ ದರ ನಿಗದಿಪಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಮಂದಿರಗಳ ಟಿಕೆಟ್‌ ದರವನ್ನು ₹200 ನಿಗದಿಗೊಳಿಸುವುದಾಗಿ ಘೋಷಿಸಿದ್ದರು.

Read more Articles on