ಕರ್ನಾಟಕ ಹೈಕೋರ್ಟ್‌ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

| N/A | Published : Apr 22 2025, 10:42 AM IST

karnataka highcourt

ಸಾರಾಂಶ

ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

 ಬೆಂಗಳೂರು : ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರನ್ನು ಒಡಿಶಾ, ನ್ಯಾಯಮೂರ್ತಿ ಕೆ.ನಟರಾಜನ್ ಅವರನ್ನು ಕೇರಳ, ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ ಅವರನ್ನು ಗುಜರಾತ್ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಜೊತೆಗೆ, ತೆಲಂಗಾಣ ಹೈಕೋರ್ಟ್‌ ನ್ಯಾಯಮೂರ್ತಿ ಪೆರುಗು ಶ್ರೀಸುಧಾ ಮತ್ತು ಆಂಧ್ರ ಪ್ರದೇಶದ ಹೈಕೋರ್ಟ್‌ ನ್ಯಾಯಮೂರ್ತಿ ಡಾ.ಕುಂಭಜಡಲ ಮನ್ಮಥ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ಹಾಗೂ ತೆಲಂಗಾಣದ ನ್ಯಾಯಮೂರ್ತಿ ಕಸೊಜು ಸುರೇಂದರ್ (ಕೆ.ಸುರೇಂದರ್‌) ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಇದೇ ವೇಳೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

ಉನ್ನತ ನ್ಯಾಯಾಲಯಗಳಲ್ಲಿ ವೈವಿಧ್ಯತೆ ತುಂಬುವ ಮತ್ತು ನ್ಯಾಯದಾನ ಆಡಳಿತದ ಗುಣಮಟ್ಟ ಬಲಪಡಿಸುವ ಉದ್ದೇಶದಿಂದ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ತನ್ನ ಶಿಫಾರಸು ನಿರ್ಣಯದಲ್ಲಿ ಸುಪ್ರೀಂ ಕೋರ್ಟ್‌ ತಿಳಿಸಿದೆ.