ದೇಶದ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Dec 03 2024, 10:39 AM IST

DK Shivakumar Siddaramaiah

ಸಾರಾಂಶ

ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತುಮಕೂರು : ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾ ಆದಾಯ ಹೆಚ್ಚಳವಾಗಲು ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಭೇದವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು.

ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಕೊಡುತ್ತಲೇ ಬಂದಿದೆ. ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳನ್ನು ರಾಜ್ಯದಲ್ಲಿ ಮಾತ್ರ ಅನುಷ್ಟಾನ ಮಾಡಲಾಗಿದೆ. ನಮ್ಮ ಸರ್ಕಾರ ಮಹಿಳೆಯರು, ಎಲ್ಲಾ ಜಾತಿ ಹಾಗೂ ಧರ್ಮ, ಬಡವರ, ಹಿಂದುಳಿದವರ, ದಲಿತರ ಪರವಾಗಿದೆ ಎಂದರು.

ನಿಮ್ಮನ್ನು ಎದುರಿಸುವ ಶಕ್ತಿಇದೆ: ಬಿಜೆಪಿಗರಿಗೆ ಟಾಂಗ್‌ಕಳೆದ 41 ವರ್ಷದಿಂದ ನಾನು ರಾಜಕಾರಣದಲ್ಲಿದ್ದೇನೆ. 2 ಬಾರಿ ಉಪ ಮುಖ್ಯಮಂತ್ರಿ ಆಗಿದ್ದೇನೆ, 2 ಬಾರಿ ಸಿಎಂ ಆಗಿದ್ದೇನೆ. ನಿಮ್ಮನ್ನು ಎದುರಿಸುವ ಶಕ್ತಿ ಇದೆ ಎಂದು ಬಿಜೆಪಿ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ.

ತುಮಕೂರು ತಾಲೂಕಿನ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ವೇದಿಕೆಯಲ್ಲಿದ್ದ ಬಿಜೆಪಿ ಮಾಜಿ ಶಾಸಕ ಸುರೇಶಗೌಡರಿಗೆ ‘ನೋಡಪ್ಪ ಸುರೇಶಗೌಡ ಅಭಿವೃದ್ಧಿ ಆಗ್ತಾ ಇದೆ’ ಎಂದು ಕಿಚಾಯಿಸಿದರು. ಇದಕ್ಕೆ ಉತ್ತರಿಸಿದ ಸುರೇಶಗೌಡ, ವಿಧಾನಸಭೆಯಲ್ಲಿ ಮಾತನಾಡುತ್ತೇವೆ ಎಂದರು. ಅದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಅಲ್ಲೂ ಉತ್ತರ ಕೊಡುವ ಶಕ್ತಿಯಿದೆ. ಕಳೆದ 41 ವರ್ಷದಿಂದ ನಾನು ರಾಜಕಾರಣದಲ್ಲಿದ್ದೇನೆ. 2 ಬಾರಿ ಉಪ ಮುಖ್ಯಮಂತ್ರಿ ಆಗಿದ್ದೇನೆ, 2 ಬಾರಿ ಸಿಎಂ ಆಗಿದ್ದೇನೆ. ನಿಮ್ಮನ್ನು ಎದುರಿಸುವ ಶಕ್ತಿ ಇದೆ. ನಾನು ತಪ್ಪೇ ಮಾಡಿಲ್ಲ. ಹಾಗಾಗಿ, ಹೆದರುವುದಿಲ್ಲ. ತಪ್ಪು ಮಾಡಿದ್ದರೆ ಉಳಿದುಕೊಳ್ಳಲು ಆಗುತ್ತಿತ್ತಾ ಎಂದರು.