ಸಾರಾಂಶ
ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.
ಬೆಂಗಳೂರು : ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.
ಕಳೆದ ಆ.25ರಂದು ಹೊರಡಿಸಿದ್ದ 545 ಪಿಎಸ್‌ಐ ನೇಮಕಾತಿ ಅಂತಿಮ ಆಯ್ಕೆ ಪಟ್ಟಿ ಆದೇಶಕ್ಕೆ ಕೆಎಟಿ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ 545 ಪಿಎಸ್ಐ ನೇಮಕಾತಿ ಸಂಬಂಧಿಸಿ ಎಲ್ಲ ಪ್ರಕ್ರಿಯೆಗಳನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ರಾಜ್ಯದ ಎಲ್ಲ ಪೊಲೀಸ್ ಕಚೇರಿಗಳಿಗೆ ಶನಿವಾರ ತುರ್ತು ಸಂದೇಶ ರವಾನಿಸಿದ್ದಾರೆ.
ಪೊಲೀಸ್ ನೇಮಕಾತಿ ವಿಭಾಗದಿಂದ ಹೊರಡಿಸಿದ್ದ ಅಂತಿಮ ಆಯ್ಕೆ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ವಿ. ತೇಜಸ್ ಸೇರಿ ಮತ್ತಿತರ ಅಭ್ಯರ್ಥಿಗಳು ಕಳೆದ ತಿಂಗಳು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಬೆಂಗಳೂರು ಪ್ರಧಾನ ಪೀಠ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಅ.9ಕ್ಕೆ ನಿಗದಿಪಡಿಸಿದೆ.