ಸಾರಾಂಶ
ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
ಇದೇ ಮೊದಲ ಬಾರಿ ಪ್ರತಿ ಕೋರ್ಸ್‌ಗೂ ಪ್ರತ್ಯೇಕವಾದ ಪ್ರವೇಶ ವೇಳಾಪಟ್ಟಿ ಪ್ರಕಟಿಸಿದೆ. ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಚಾಯ್ಸ್‌ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದೆ. ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಲು ಆ.2ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.9 ಕಡೆ ದಿನ ಎಂದು ಕೆಇಎ ಸಿಇಒ ಎಚ್.ಪ್ರಸನ್ನ ತಿಳಿಸಿದ್ದಾರೆ.
ವಾರಾಂತ್ಯದಲ್ಲೂ ಕೆಲಸಕ್ಕೆ ಸೂಚನೆ:
ಕೌನ್ಸೆಲಿಂಗ್ ನಡೆಸಲು ವೇಳಾಪಟ್ಟಿಯಲ್ಲಿ ಲಭ್ಯವಿರುವ ಸೀಮಿತ ಸಮಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲ ಕಾಲೇಜುಗಳು ಎಲ್ಲಾ ಶನಿವಾರ ಮತ್ತು ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳನ್ನು ಕೂಡ ಕೆಲಸದ ದಿನಗಳೆಂದು ಪರಿಗಣಿಸಲು ಕೆಇಎ ಸೂಚಿಸಿದೆ.