ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಬೆನ್ನಲ್ಲೇ, ‘ಕೇಸರಿ ಶಾಲಿಗೆ ಏಕೆ ಅವಕಾಶವಿಲ್ಲ’ ಎಂಬ ಕೂಗು ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಸಾಂಪ್ರದಾಯಿಕವಾಗಿ ಇರುವ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾತ್ರ ಇದೆ ಎಂದು ಹೇಳಿದ್ದಾರೆ.
ಮೈಸೂರು : ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಬೆನ್ನಲ್ಲೇ, ‘ಕೇಸರಿ ಶಾಲಿಗೆ ಏಕೆ ಅವಕಾಶವಿಲ್ಲ’ ಎಂಬ ಕೂಗು ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಸಾಂಪ್ರದಾಯಿಕವಾಗಿ ಇರುವ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾತ್ರ ಇದೆ. ಹೊಸದಾಗಿ ಸಂಪ್ರದಾಯ ಆರಂಭಿಸಲು ಅವಕಾಶ ಇಲ್ಲ’ ಎಂದು ಹೇಳಿದ್ದಾರೆ.
ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು.
ಹೊಸದಾಗಿ ಯಾವುದನ್ನೂ ಮಾಡುವಂತಿಲ್ಲ
ಹೊಸದಾಗಿ ಯಾವುದನ್ನೂ ಮಾಡುವಂತಿಲ್ಲ, ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದೇ ಹೊರತು ಹೊಸದಾಗಿ ಕೇಸರಿ ಶಾಲು ಸೇರಿದಂತೆ ಯಾವುದನ್ನೂ ಹಾಕಿಕೊಂಡು ಬರುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.