ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ

| N/A | Published : May 25 2025, 11:07 AM IST

Kodimutt
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್‌ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್‌ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ ಕಾರ್ಮೋಡ ಕವಿದಿತ್ತು ಎಂದು ನುಡಿದಿದ್ದಾರೆ.

ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು, ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿ ನಂತರ ಎನಾಗುತ್ತೆ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

Read more Articles on