ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ

| Published : Jul 30 2024, 10:02 AM IST

KPSC New 01

ಸಾರಾಂಶ

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ (ಗ್ರೂಪ್-ಎ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ (ಗ್ರೂಪ್-ಎ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ

 ಆಗಸ್ಟ್12ರಿಂದ ಸೆಪ್ಟೆಂಬರ್ 12ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಪಶು ವೈದ್ಯಕೀಯ ವಿಜ್ಞಾನ (ಬಿ.ವಿ.ಎಸ್‌ಸಿ) ಹಾಗೂ ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (ಬಿ.ವಿ.ಎಸ್‌ಸಿ ಮತ್ತು ಎಎಚ್‌) ಪದವೀಧರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಸಾಮಾನ್ಯ ಪತ್ರಿಕೆ ಹಾಗೂ ನಿರ್ದಿಷ್ಟ ಪತ್ರಿಕೆಯನ್ನು ಒಳಗೊಂಡಿದೆ. ಲಿಖಿತ, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು ಅಂಕ ಕಡಿತಗೊಳಿಸಲಾಗುತ್ತದೆ. ಅಭ್ಯರ್ಥಿಗಳು 150 ಅಂಕಗಳ ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

- ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನೇಮಕ