ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದ ಶಾಸಕನ ಪುತ್ರನಿಗೆ ಕ್ಷೀರಾಭಿಷೇಕ - ಬಸವೇಶ್‌ ವಿರುದ್ಧ ಕುತಂತ್ರ : ಕೈ ಕಾರ್ಯಕರ್ತರು

| N/A | Published : Feb 16 2025, 09:34 AM IST

Congress flag
ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದ ಶಾಸಕನ ಪುತ್ರನಿಗೆ ಕ್ಷೀರಾಭಿಷೇಕ - ಬಸವೇಶ್‌ ವಿರುದ್ಧ ಕುತಂತ್ರ : ಕೈ ಕಾರ್ಯಕರ್ತರು
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾದ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಅವರ ಪುತ್ರ ಬಿ.ಎಸ್.ಬಸವೇಶ್‌ಗೆ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

  ಭದ್ರಾವತಿ : ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾದ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಅವರ ಪುತ್ರ ಬಿ.ಎಸ್.ಬಸವೇಶ್‌ಗೆ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಬಸವೇಶ್‌ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೆಲವು ದಿನಗಳಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೋರಾಟ ನಡೆಸುತ್ತಿವೆ. ಶುಕ್ರವಾರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.

ಈ ಮಧ್ಯೆ, ಶನಿವಾರ ನಗರಸಭೆ ಅಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಮುಂಭಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿದ್ದರು. ಬೈಕ್ ರ್‍ಯಾಲಿ ಸಹ ನಡೆಸಿದರು. ಈ ವೇಳೆ ಅಲ್ಲಿಗೆ ಆಗಮಿಸಿದ ಬಸವೇಶ್‌ಗೆ 2-3 ಕೊಡ ಹಾಲಿನ ಅಭಿಷೇಕ ಮಾಡಿ, ಅವರಿಗೆ ಜೈಕಾರ ಕೂಗಿದರು. ಅವರ ವಿರುದ್ಧದ ಆರೋಪಗಳು ನಿರಾಧಾರ, ಅವರ ವಿರುದ್ಧ ಕುತಂತ್ರ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.