ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?

| N/A | Published : Aug 29 2025, 07:33 AM IST

liquor
ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?
Share this Article
  • FB
  • TW
  • Linkdin
  • Email

ಸಾರಾಂಶ

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

  ಬೆಂಗಳೂರು :  ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಮದ್ಯ ನಿಷೇಧ ಎಲ್ಲೆಲ್ಲಿ?

ಆ.29, ಆ.30 ರ ಬೆಳಗ್ಗೆ 6 ರಿಂದ ರಾತ್ರಿ 12 ವರೆಗೆ

ಆರ್‌.ಟಿ. ನಗರ, ಜೆ.ಸಿ. ನಗರ, ಹೆಬ್ಬಾಳ, ಸಂಜಯನಗರ, ವಿಜಯನಗರ, ಕೆ.ಪಿ. ಅಗ್ರಹಾರ, ಗೋವಿಂದರಾಜನಗರ, ಮಾಗಡಿ ರಸ್ತೆ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ತಲಘಟ್ಟಪುರ, ಸುಬ್ರಹ್ಮಣ್ಯ ನಗರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು, ಯಲಹಂಕ, ಯಲಹಂಕ ಉಪನಗರ, ಎಲೆಕ್ಟ್ರಾನಿಕ್ ಸಿಟಿ ವಿಭಾಗ ಹಾಗೂ ವೈಟ್‌ ಫೀಲ್ಡ್ ವಿಭಾಗದ ಎಲ್ಲ ಠಾಣೆಗಳು.

ಆ.31 ರ ಬೆಳಗ್ಗೆ 6 ರಿಂದ ರಾತ್ರಿ 12 ವರೆಗೆ

ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್‌ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್‌, ಜೆ.ಸಿ. ನಗರ, ಆರ್‌.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು.

 

Read more Articles on