ವಾಯುಭಾರ ಕುಸಿತ ಹಿನ್ನೆಲೆ 10 ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

| N/A | Published : Sep 27 2025, 11:10 AM IST

Kerala rain warning
ವಾಯುಭಾರ ಕುಸಿತ ಹಿನ್ನೆಲೆ 10 ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.

 ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ. 

ಒಡಿಶಾ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆ ಮಾರುತಗಳು ಚುರುಕುಗೊಂಡಿವೆ. ಇದರ ಪರಿಣಾಮ ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಹೆಚ್ಚಿನ ಮಳೆ ಆಗುವ ನಿರೀಕ್ಷೆ ಇದೆ. ಹೀಗಾಗಿ, ಶನಿವಾರಕ್ಕೆ ಬಾಗಲಕೋಟೆ, ಬೀದರ್‌, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಭಾನುವಾರಕ್ಕೆ ಯಾದಗಿರಿ, ಕಲಬುರಗಿ, ಬೀದರ್‌ ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ವಿಜಯನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಮಳೆಯೊಂದಿಗೆ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗುವ ಲಕ್ಷಣ ಇದೆ. 

ಗಾಳಿಯು 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಅ.1 ರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಸೋಮವಾರದಿಂದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read more Articles on