ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಶಿವಮೊಗ್ಗ : ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಇರಾನ್ ಮೇಲೆ ನಡೆಸಿರುವ ದಾಳಿ ಅನಗತ್ಯ
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಂತ್ರ ಪಠಿಸುವ ಅಮೆರಿಕ, ಮತ್ತೊಂದೆಡೆ ಯುದ್ಧ ಮಾಡುತ್ತದೆ.
ಅಮೆರಿಕ ತದ್ವಿರುದ್ಧವಾದ ನಿಲುವು
ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ. ಕ್ಷಿಪಣಿ ದಾಳಿಯಲ್ಲಿ ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.