ಒಳ ಮೀಸಲು ಸಿದ್ದರಾಮಯ್ಯ ಚಿತ್ರಕ್ಕೆ ಹಾಲಿನ ಅಭಿಷೇಕ

| N/A | Published : Aug 21 2025, 09:21 AM IST

Karnataka CM Siddaramaiah (Photo/ANI)
ಒಳ ಮೀಸಲು ಸಿದ್ದರಾಮಯ್ಯ ಚಿತ್ರಕ್ಕೆ ಹಾಲಿನ ಅಭಿಷೇಕ
Share this Article
  • FB
  • TW
  • Linkdin
  • Email

ಸಾರಾಂಶ

ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.

  ಬೆಂಗಳೂರು/ಚಾಮರಾಜನಗರ :  ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು. 

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಎಚ್‌.ಆಂಜನೇಯ ನೇತೃತ್ವದ ಮಾದಿಗ ಸಮುದಾಯದ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಮುಖ್ಯಮಂತ್ರಿ ನಿವಾಸ ಕಾವೇರಿ ಬಳಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಮಾದಿಗ ಸಮುದಾಯದವರು, ಸಿದ್ದರಾಮಯ್ಯ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕದ ಜೊತೆ ಹೂವಿನ ಮಳೆ ಸುರಿಸಿ ಸಂತಸ ವ್ಯಕ್ತಪಡಿಸಿದರು. ಬಳಿಕ ಸಿಎಂ ನಿವಾಸ ಪ್ರವೇಶಿಸಿದ ಆಂಜನೇಯ ಮತ್ತಿತರರು, ಸಿದ್ದರಾಮಯ್ಯ ಅವರಿಗೆ ಬೃಹತ್‌ ಹೂವಿನ ಹಾರ ಹಾಕಿ ಅಭಿನಂದಿಸಿ, ಕೃತಜ್ಞತೆ ಸಲ್ಲಿಸಿದರು.

ವಕೀಲ ರವೀಂದ್ರ, ಕೊಪ್ಪಳದ ಗುಳೇಪ್ಪ, ಕಲಬುರಗಿಯ ಶ್ಯಾಮ್ ನಾಟಿಕೇರ್, ಬೀದರ್‌ನ ಚಂದ್ರಕಾಂತ್‌ ಇಪ್ಪಾಳ್ಗ, ಹೊಸಕೋಟೆ ಸುಬ್ಬಣ್ಣ, ಮಹದೇವಪುರದ ಚಿಮ್ಮಿ, ಹಾಸನದ ಶಂಕರ್‌ರಾಜ್, ಚಿತ್ರದುರ್ಗ ಶರಣಪ್ಪ, ನರಸಿಂಹರಾಜ್, ಮಾಗಡಿ ಮಂಜೇಶ್, ಬೆಂಗಳೂರಿನ ಮುತ್ತುರಾಜ್, ರಾಯಚೂರಿನ ಶರಣು ಹಾಜರಿದ್ದರು.

ಇನ್ನು ಚಾಮರಾಜನಗರದಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಹೊಲೆಯ, ಮಾದಿಗ ಜನಾಂಗಗಳಿಗೆ ಶೇ.6ರಷ್ಟು ಹಾಗೂ ಇತರೇ ಸಮುದಾಯಕ್ಕೆ ಶೇ.5 ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡಿ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದೆ ಕೊಟ್ಟಿದೆ ಎಂದು ಬಲಗೈ-ಎಡಗೈ ಎರಡೂ ಸಮುದಾಯಗಳ ಮುಖಂಡರು ಒಟ್ಟಿಗೆ ಸೇರಿ ವಿಜಯೋತ್ಸವ ಆಚರಿಸಿದರು.

ಅನೇಕರು ಜಮಾಯಿಸಿ ರಾಜ್ಯ ಸರ್ಕಾರ ಹಾಗೂ ಡಾ। ಬಿ.ಆರ್.ಅಂಬೇಡ್ಕರ್ ಪರ ಘೋಷಣೆಗಳನ್ನು ಕೂಗಿ ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

Read more Articles on