ಸಾರಾಂಶ
ದೇಶದಲ್ಲಿ ಸದ್ಯದ ಪರಿಸ್ಥಿತಿ ಗಮನಿಸಿದರೆ 2029ರ ವೇಳೆಗೆ 2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆಯಬೇಕಾದ ಅಗತ್ಯವಿದೆ - ಡಿ.ಕೆ.ಶಿವಕುಮಾರ್
ಬೆಂಗಳೂರು : ದೇಶದಲ್ಲಿ ಸದ್ಯದ ಪರಿಸ್ಥಿತಿ ಗಮನಿಸಿದರೆ 2029ರ ವೇಳೆಗೆ 2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆಯಬೇಕಾದ ಅಗತ್ಯವಿದೆ. ಅದರ ಭಾಗವಾಗಿ ಪ್ರಜಾಪ್ರಭುತ್ವ, ಸಂವಿಧಾನ, ದೇಶದ ಚುನಾವಣಾ ವ್ಯವಸ್ಥೆ ರಕ್ಷಣೆ ಹಾಗೂ ದೇಶದಲ್ಲಿನ ಸರ್ವಾಧಿಕಾರ ತೊಲಗಿಸಲು ನಾವೆಲ್ಲ ಶಪಥ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕುತಂತ್ರಗಳ ಮೂಲಕ ಈ ಸ್ವಾತಂತ್ರ್ಯಕ್ಕೆ ಧಕ್ಕೆ ತರುವವರು ಸಂವಿಧಾನ ವಿರೋಧಿಗಳು ಮಾತ್ರವಲ್ಲದೆ ಜನರ ಜೀವನ ವಿರೋಧಿಗಳು. ಮತ ಕಳ್ಳತನ ದೇಶದ ಗೌರವಕ್ಕೆ ಧಕ್ಕೆ ತರುವಂತಾಗಿದೆ.
ಅದರ ವಿರುದ್ಧದ ಹೋರಾಟಕ್ಕೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಆರಂಭಿಸಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಶಿವಕುಮಾರ್ ಕರೆ ನೀಡಿದರು.