ದರ್ಶನ್‌ರಂತೆ ಬೇಲ್‌ ಕೊಡಿ ಎಂದ ನೇಹಾ ಹಂತಕ : ಇಂದು ತೀರ್ಪು

| N/A | Published : Aug 04 2025, 10:44 AM IST

Neha Case

ಸಾರಾಂಶ

ಕಳೆದ ವರ್ಷ ಹುಬ್ಬಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಇಂದು ತೀರ್ಪು ಪ್ರಕಟವಾಗಲಿದೆ.

ಹುಬ್ಬಳ್ಳಿ: ಕಳೆದ ವರ್ಷ ಹುಬ್ಬಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಇಂದು ತೀರ್ಪು ಪ್ರಕಟವಾಗಲಿದೆ. ನೇಹಾ ಹತ್ಯೆ ದೇಶಾದ್ಯಂತ ಸದ್ದು ಮಾಡಿತ್ತು. 

ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಮಾರಕಾಸ್ತ್ರಗಳಿಂದ ಚುಚ್ಚಿ ಹತ್ಯೆಗೈದಿದ್ದ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಫಯಾಜ್ ಜಾಮೀನು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾನೆ. 

 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿದಂತೆ ನನಗೂ ಜಾಮೀನು ನೀಡಿ ಎಂದು ಫಯಾಜ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾನೆ. 

ಹುಬ್ಬಳಿಯ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸೋಮವಾರ ತೀರ್ಪು ಹೊರಬೀಳಲಿದೆ. ನೇಹಾ ಹಿರೇಮಠ ಹತ್ಯೆಯಾಗಿ ವರ್ಷ ಕಳೆದರೂ ಇನ್ನೂ ಆರೋಪಿಗೆ ಶಿಕ್ಷೆ ಪ್ರಕಟವಾಗಿಲ್ಲ. ಪ್ರಕರಣದಲ್ಲಿ ಲವ್ ಜಿಹಾದ್ ಆರೋಪವೂ ಕೇಳಿ ಬಂದಿತ್ತು.

Read more Articles on