ಸಾರಾಂಶ
ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ
ಬೆಂಗಳೂರು : ನೇರಳೆ ಮಾರ್ಗದ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬೆಳಗ್ಗೆ 8 ರಿಂದ ಸಾಮಾನ್ಯ ಸೇವೆಗಳನ್ನು ಪುನಾರಂಭಿಸುತ್ತದೆ. ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದೆ. ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆವರೆಗಿನ ಸೇವೆಗಳು ಬೆಳಗ್ಗೆ 7 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.