ಸಾರಾಂಶ
ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.
ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6-30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆವರೆಗೆ ಮಾತ್ರ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವಾರದ 5 ದಿನಗಳು ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.