ಮುಂಬರುವ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಕೇಂದ್ರದ ಎಸ್‌ಐಆರ್‌ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ನಂತರದ ದತ್ತಾಂಶ ಆಧಾರಿತ ಮತದಾರರ ಪಟ್ಟಿಯ ಬದಲಿಗೆ ಹಳೆಯ ಮತದಾರರ ಪಟ್ಟಿಯನ್ನೇ ಆಧರಿಸಿ ಚುನಾವಣೆ ನಡೆಸಲೂ ಕಾನೂನಿನಲ್ಲಿ ಅವಕಾಶ ಇದೆ.

ಬೀದರ್‌: ಮುಂಬರುವ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಕೇಂದ್ರದ ಎಸ್‌ಐಆರ್‌ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ನಂತರದ ದತ್ತಾಂಶ ಆಧಾರಿತ ಮತದಾರರ ಪಟ್ಟಿಯ ಬದಲಿಗೆ ಹಳೆಯ ಮತದಾರರ ಪಟ್ಟಿಯನ್ನೇ ಆಧರಿಸಿ ಚುನಾವಣೆ ನಡೆಸಲೂ ಕಾನೂನಿನಲ್ಲಿ ಅವಕಾಶ ಇದೆ. ಈ ಕುರಿತಂತೆ ನ.5ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಮೊದಲನೇ ಹಂತದ ಅಧಿಸೂಚನೆ ಹೊರಡಿಸಲಾಗಿದೆ

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಈಗಾಗಲೇ ಮೊದಲನೇ ಹಂತದ ಅಧಿಸೂಚನೆ ಹೊರಡಿಸಲಾಗಿದೆ. ಅ.19ರವರೆಗೆ ಆಕ್ಷೇಪಣೆಗೆ ಕಾಲವಕಾಶ ಇತ್ತು, 2,200 ಆಕ್ಷೇಪಣೆಗಳು ಬಂದಿದ್ದು ಅಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೊಂದು ವಾರದ ಒಳಗಾಗಿ ಅಂತಿಮ ಹಂತದ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೀಸಲಾತಿ ಘೋಷಣೆ ಮಾಡುವುದು ರಾಜ್ಯ ಸರ್ಕಾರ

ಚುನಾವಣೆ ಘೋಷಣೆ ಮಾಡುವುದು ರಾಜ್ಯ ಚುನಾವಣಾ ಆಯೋಗ ಮತ್ತು ಮೀಸಲಾತಿ ಘೋಷಣೆ ಮಾಡುವುದು ರಾಜ್ಯ ಸರ್ಕಾರ. ಹೀಗಾಗಿ, ಕೆಲವು ಪ್ರಕ್ರಿಯೆಗಳ ನಂತರ ಡಿ.15ರ ನಂತರ ಯಾವುದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಗಳಿವೆ. ಜ.15ರ ಒಳಗಾಗಿ ಚುನಾವಣೆ ನಡೆಯುವ ವಿಶ್ವಾಸ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.