ಸಾರಾಂಶ
ವಿದ್ಯುತ್ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ವಿದ್ಯುತ್ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಂಪನಿಯ ಇ-ಸ್ಕೂಟರ್‌ಗಳ ಮಾರಾಟ ಕಡಿಮೆಯಾಗಿದ್ದು, ಲಾಭ ಇಲ್ಲದಂತಾಗಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ನಷ್ಟದ ಪ್ರಮಾಣ ಶೇ.50ರಷ್ಟು ಏರಿಕೆಯಾಗಿದೆ.
ಈ ಹಿನ್ನೆಲೆ, ವೆಚ್ಚ ಸರಿದೂಗಿಸುವ ಉದ್ದೇಶದಿಂದ ವಿವಿಧ ವಿಭಾಗಗಳಲ್ಲಿರುವ ಹೆಚ್ಚುವರಿ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಕಳೆದ ನವೆಂಬರ್‌ನಲ್ಲಷ್ಟೆ 500 ನೌಕರರರನ್ನು ತೆಗೆದುಹಾಕಲಾಗಿತ್ತು.