ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂಬಂಧಪಟ್ಟ ಸಣ್ಣ ವರ್ತಕರ ಹಳೆಯ ತೆರಿಗೆ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತೀವ್ರ ಚರ್ಚೆಗೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ (ಜಾತಿ ಆಧಾರಿತ ಜನಗಣತಿ) ಸಿದ್ಧಪಡಿಸುವ ಸಂಬಂಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಮರು ಸಮೀಕ್ಷೆಯು ಸೆ.22 ರಿಂದ ಅ.7ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ.
ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ