ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ನಡುವಣ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ
ಬೆಂಗಳೂರಿನಲ್ಲಿ ಕಸದ ಸೆಸ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಪೂರ್ವ ಮತ್ತು ಮುಂಗಾರು ಮಳೆಯ ಅಬ್ಬರದಿಂದಾಗಿ ಬೆಂಗಳೂರಿನಲ್ಲಿ ಮೇ ತಿಂಗಳ ದಾಖಲೆಯ 307.9 ಮಿಮೀ ಮಳೆಯಾಗಿದೆ.
ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಡಾ.ಬಿ.ಕೆ.ಮೀರಾ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪಾನಮತ್ತ ಚಾಲಕ ಒನ್ ವೇ ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಬ್ಯಾರಿಗೇಡ್‌ಗೆ ಡಿಕ್ಕಿ ಹೊಡೆದು ಬಳಿಕ ಪೊಲಿಸ್ ಕಾನ್ಸ್‌ಟೇಬಲ್‌ಗೂ ಗುದ್ದಿಸಿ ಗಾಯಗೊಳಿಸಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು, ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಸೋಮವಾರ ನಾಲ್ವರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.
ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು - ಸಿದ್ದರಾಮಯ್ಯ
ಆಂಧ್ರಪ್ರದೇಶಕ್ಕೆ ಎಚ್‌ಎಎಲ್ ವಿಮಾನ ತಯಾರಿಕೆ ಘಟಕ ಸ್ಥಳಾಂತರಿಸಬೇಕೆಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮನವಿ ಸರಿಯಲ್ಲ. ಬೇಕಿದ್ದರೆ ಅವರ ರಾಜ್ಯದಲ್ಲಿ ಎಚ್‌ಎಎಲ್ ಘಟಕ ಸ್ಥಾಪಿಸಲು ಮನವಿ ಮಾಡಿಕೊಳ್ಳಲಿ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.