ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ.
ಮೈಕ್ರೋ ಫೈನಾನ್ಸ್ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ (ಬಿಬಿಎಂಪಿ) ಅವ್ಯವಸ್ಥೆಯನ್ನು ಬಯಲಿಗೆಳೆದ ಲೋಕಾಯುಕ್ತ ಸಂಸ್ಥೆಯು ಇದೀಗ ತೂಕ ಮತ್ತು ಮಾಪನ ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದೆ.
ಸಂತಾನಹೀನತೆ ಮತ್ತು ಸಂಸ್ಕಾರಹೀನತೆ ಸಮಾಜಕ್ಕೆ ಅಪಾಯಕಾರಿ ಎಂದು ಹೇಳಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಬ್ರಾಹ್ಮಣರು ಸಂತಾನ ಮತ್ತು ಸಂಸ್ಕಾರಕ್ಕೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದ್ದಾರೆ.