ಜಿಲ್ಲೆಯ ಕಪ್ಪತಗುಡ್ಡ ವನ್ಯಜೀವಿ ಧಾಮದ ಅಂಚಿನ ಗ್ರಾಮಗಳ ಸಮೀಪದಲ್ಲಿ ಕಾಡು ಪ್ರಾಣಿಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ.
ಮುಂದಿನ ಮೂರು ವರ್ಷದಲ್ಲಿ ಬೆಂಗಳೂರು ಹಾಗೂ ಸುತ್ತಲಿನ ನೂರು ಕಿ.ಮೀ. ವ್ಯಾಪ್ತಿಯ ಎಲ್ಲ ಲೆವೆಲ್ ಕ್ರಾಸ್‌ಗಳನ್ನು ತೆಗೆದು ರಸ್ತೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ ಮಾಡಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆಗಸ್ಟ್‌ನಲ್ಲಿ ಆರಂಭಿಸುವ ಸಾಧ್ಯತೆ ಇರುವುದರಿಂದ ಸಮಯ, ವೇಳಾಪಟ್ಟಿ ರೂಪಿಸುವುದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸವಾಲಾಗಿ ಪರಿಣಮಿಸಿದೆ.
ಬಿಹಾರದಲ್ಲಿ ಈಗ ನಡೆಯುತ್ತಿರುವ ರೀತಿಯಲ್ಲೇ ಮುಂದಿನ ತಿಂಗಳಿಂದ ದೇಶಾದ್ಯಂತ ಮತದಾರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ಅನ್ನು ಆರಂಭಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ
‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಸೋಮವಾರ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆ ಬಗ್ಗೆ ಮಹಿಳಾ ಅಧಿಕಾರಿಯ ಟೀಕೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಲ್ಲಿನ ಉಪ ನೋಂದಣಾಧಿಕಾರಿ ರಾಧಮ್ಮ ಅವರನ್ನು ಎತ್ತಗಂಡಿ ಮಾಡಿ ಜಿಲ್ಲಾ ಕೇಂದ್ರದ ಕಚೇರಿಗೆ ನಿಯೋಜಿಸಿದ್ದಾರೆ
ನಗರದ ಹೊರವಲಯದಲ್ಲಿರುವ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಮೊಬೈಲ್ ನುಂಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೀದಿ ನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ದೇವನಹಳ್ಳಿಯ ಜಮೀನು ಸ್ವಾಧೀನ ವಿರೋಧಿಸಿ ರೈತರ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಇದೇ ಭಾಗದ ಕೆಲ ರೈತರು ಎಕರೆಗೆ 3.5 ಕೋಟಿ ರು. ಪರಿಹಾರ ನೀಡಿ ಜಮೀನು ಸ್ವಾಧೀನಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದ್ದಾರೆ.