ಭಾರಿ ಮಳೆಗೆ ರಾಜ್ಯ ತತ್ತರ : ತೀವ್ರ ಹಾನಿ - 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ.