ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.
ಕಳೆದ 2016ರಲ್ಲಿ ರೂಪಿಸಲಾಗಿದ್ದ ಮೆಜೆಸ್ಟಿಕ್‌ನಲ್ಲಿ ಬಹುಮಹಡಿ ಇಂಟರ್ ಮಾಡೆಲ್ ಸಾರಿಗೆ ಕೇಂದ್ರ ನಿರ್ಮಾಣಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, ಯೋಜನೆ ಜಾರಿ ಸಂಬಂಧ ತಾಂತ್ರಿಕ ಸಲಹೆಗಾರರನ್ನು ನೇಮಿಸಲು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ
ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್‌ಡಿಸಿ) ನೆಟ್‌ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.
‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರದಲ್ಲಿ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಾಂತಿ-ಭೇದಿಗೆ ಮೂವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ, 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು(ಎಸ್‌ಡಿಎಂಸಿ) ಕೈಗೊಂಡಿರುವ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ ಎಂದು ಅಜೀಂ ಪ್ರೇಮ್ ಜೀ ಫೌಂಡೇಷನ್ ಆರೋಪಿಸಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ವರದಕ್ಷಿಣೆ ಕಿರುಕುಳದ ಆರೋಪದ ಅಡಿ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಹಾಗೂ ಎಷ್ಟು ಪಾಲಿಕೆ ರಚಿಸಬೇಕು ಎಂಬುದರ ಬಗ್ಗೆ ಸಮಿತಿ ಅಂತಿಮ ವರದಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.