ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಖಾನಾಪುರ ತಾಲೂಕಿನ ಅನ್ಮೋಡ್‌ನಲ್ಲಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ.
ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದ್ದು, ಅದನ್ನು ಸರ್ಕಾರದ ಅಭಿಪ್ರಾಯವಾಗಿಸಲು ಪ್ರಯತ್ನಿಸುತ್ತೇನೆ. ಆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಲೆ ಆರಂಭಗೊಂಡು ಒಂದು ತಿಂಗಳು ಕಳೆದರೂ ಬಿಬಿಎಂಪಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಭಾಗ್ಯ ಸಿಕ್ಕಿಲ್ಲ. ಸಮವಸ್ತ್ರ, ಶೂ, ಸಾಕ್ಸ್ ಗೆ ಇನ್ನೊಂದು ತಿಂಗಳು ಕಾಯಬೇಕಿದೆ.
ಎಕ್ಸ್‌ಪ್ರೆಸ್ ವೇ ನಿರ್ಮಾಣಕ್ಕಾಗಿ ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸಸ್ ಲಿಮಿಟೆಡ್‌ಗೆ (ನೈಸ್) ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಸುಮಾರು 300 ಎಕರೆಗೂ ಹೆಚ್ಚು ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಹೈಕೋರ್ಟ್ ರದ್ದುಪಡಿಸಿದೆ.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಅನುಷ್ಠಾನದಲ್ಲಿನ ತಾಂತ್ರಿಕ ದೋಷಗಳ ಕುರಿತು ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು. ನಂತರ ಅಗತ್ಯವಿದ್ದರೆ ಐಐಎಸ್ಸಿ, ಐಐಟಿ ತಜ್ಞರ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಾಜ್ಞೆ ಹೊರಡಿಸಿದೆ.
ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಮನೆ ಕುಸಿದು ಎರಡು ಆಟೋ, ಒಂದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ