ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸರಣಿ ಮುಂದುವರಿದಿದ್ದು, ಗುರುವಾರ ಒಂದೇ ದಿನ 7 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಶುಭಾಂಶು ಶುಕ್ಲಾ ಅವರು ಜುಲೈ 4 ರಂದು ಶುಕ್ರವಾರ ಸಂಜೆ ‘ಹ್ಯಾಂ ರೇಡಿಯೋ’ ಮುಖಾಂತರ ಅಂತಾರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿರುವ ತಮ್ಮ ಕಕ್ಷೀಯ ಸ್ಥಳದಿಂದ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಯ ವಿಜ್ಞಾನಿಗಳು ಹಾಗೂ ಶಾಲಾ ಮಕ್ಕಳೊಂದಿಗೆ ಸಂಭಾಷಣೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪ ಮೇರೆಗೆ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳು ಗುರುವಾರ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದರು
ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಕೇವಲ ಪೂರ್ಣಕಾಲಿಕ ಮಾತ್ರವಲ್ಲದೆ, ಅರೆಕಾಲಿಕ ಪತ್ರಕರ್ತರು, ಸಂಪಾದಕರಿಗೂ ನೀಡಲು ಷರತ್ತುಬದ್ಧ ಪರಿಷ್ಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.
ಮುಂಗಾರು ಹಂಗಾಮಿನ ಆರಂಭದ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೂ ಉತ್ತರ ಒಳನಾಡಿನಲ್ಲಿ ಬಿತ್ತನೆ ಚುರುಕಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಮಾತ್ರ ಭಾರೀ ಹಿನ್ನಡೆ ಉಂಟಾಗಿದೆ.
ಬೆಂಗಳೂರಿನ ಕೇತೋಹಳ್ಳಿಯಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾಮಠದಲ್ಲಿ ನಿರ್ಮಿಸಲಾಗಿರುವ ‘ಭಕ್ತರ ಭಂಡಾರದ ಕುಟೀರ’ ಜುಲೈ 6ರಂದು ಲೋಕಾರ್ಪಣೆಗೊಳ್ಳಲಿದೆ.
ಅತ್ಯಂತ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆಯಾಗಿರುವ ಎಚ್‌ಸಿಜಿಯಲ್ಲಿ ಸುರಕ್ಷತೆ ಮೇಲೆ ಗಣನೀಯ ಪರಿಣಾಮ ಬೀರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಪ್ರಖ್ಯಾತ ಜಾಗತಿಕ ಔಷಧ ಕಂಪನಿ ಎಲಿ ಲಿಲ್ಲಿ ಅಂಡ್ ಕಂಪನಿಯು ತನ್ನ ಸಹಯೋಗವನ್ನೇ ರದ್ದುಪಡಿಸಿತ್ತು ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.
ಕರ್ನಾಟಕ ಜಿಐ (ಜಿಯೋಗ್ರಾಫಿಕಲ್ ಇಂಡಿಕೇಷನ್) ಸ್ಥಾನಮಾನ ಹೊಂದಿರುವ ಕೊಲ್ಹಾಪುರಿ ಪಾದರಕ್ಷೆಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ನಕಲು ಮಾಡಿದ ಪ್ರಾಡಾ ಕಂಪನಿ ವಿರುದ್ಧ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್) 500 ಕೋಟಿ ರು.ಗಳ ಹಾನಿ ಭರ್ತಿ ಮಾಡುವಂತೆ ಮೊಕದ್ದಮೆ ದಾಖಲಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.