58% ಮುಸ್ಲಿಮರು ನಗರವಾಸಿ!ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಆಧಾರಿತ ಜನಗಣತಿ) ವರದಿಯಲ್ಲಿರುವಂತೆ, ಮುಸ್ಲಿಂ ಸಮುದಾಯ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದೆ. ಇದೇ ವೇಳೆ ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು ಹಾಗೂ ಕುರುಬರ ಸಂಖ್ಯೆ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲೇ ಹೆಚ್ಚು ಎಂಬ ಅಂಶ ಬೆಳಕಿಗೆ ಬಂದಿದೆ.