ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ಶೇ.5 ತೆರಿಗೆ ವಿಧಿಸಲು ಕರ್ನಾಟಕ ವಿದ್ಯುತ್ (ಬಳಕೆ ಮೇಲಿನ ತೆರಿಗೆ) ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮವನ್ನು ಅಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.
ರಾಜ್ಯ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ದರದಂತೆ ಪ್ರತಿ ಕ್ವಿಂಟಲ್ ಮಾವಿಗೆ 1,616 ರು. ನಿಗದಿ ಪಡಿಸಲಾಗಿದ್ದು, ಮುಂದಿನ ಒಂದು ತಿಂಗಳವರೆಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಜಾರಿಯಲ್ಲಿರಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸೇರಿದ ನಗರದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿದರು.
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಸಂಪತ್ತು ವಾಪಸ್ ಬರಬೇಕು: ಎಚ್.ಕೆ.
- ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟನೆ
ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ.
ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ