ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.
ಈ ಬಾರಿ ಡಾ। ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ‘ಯಜಮಾನರ ಅಮೃತ ಮಹೋತ್ಸವ’ ಹೆಸರಿನಲ್ಲಿ ಸೆ.18ರಿಂದ ನಾಲ್ಕು ದಿನ ರಾಜ್ಯಾದ್ಯಂತ ಡಾ। ವಿಷ್ಣುವರ್ಧನ್ ಅಮೃತ ಮಹೋತ್ಸವ ಆಚರಿಸಲು ಡಾ। ವಿಷ್ಣು ಸೇನಾ ಸಮಿತಿ ನಿರ್ಧರಿಸಿದೆ.
‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ.
ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿಗೆ ಸಮೀಪದ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ.
ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್ ನೋಟಿಸ್ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ
ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.