ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಯೋಗ ತರಬೇತಿ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು
‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.
ವಿಶ್ವದಲ್ಲಿ ವಾಯು ಮಾಲಿನ್ಯದಲ್ಲಿ ಐದನೇ ಸ್ಥಾನದಲ್ಲಿ ಭಾರತವು, ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಭಾರೀ ಪರಿಣಾಮ ಎದುರಿಸಬೇಕಾಗಲಿದೆ ಎಂದು ರಾಜ್ಯ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುಳಾ ಹೇಳಿದರು.
ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಡಾ.ಬಿ.ಎಲ್. ಶಂಕರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಕೆ.ಆರ್.ಮಾರುಕಟ್ಟೆ ಬಳಿ ಕಸ ಎಸೆಯುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಪಶ್ಚಿಮ ವಲಯದ ಆಯುಕ್ತ ಸುರಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಗರದಲ್ಲಿ ಏಕಕಾಲಕ್ಕೆ ಇಟಲಿ, ಅಮೆರಿಕ, ಬ್ರಿಟನ್, ದುಬೈ, ಸೈಪ್ರಸ್ ಸೇರಿ 30 ರಾಷ್ಟ್ರಗಳ 2500ಕ್ಕೂ ಅಧಿಕ ಯೋಗಪಟುಗಳು ವಿವಿಧ ಆಸನಗಳಲ್ಲಿ ನಿಗದಿತ ಅವಧಿಗೆ ನಿಲ್ಲುವ ಮೂಲಕ ನೂತನ 12 ಗಿನ್ನಿಸ್ ದಾಖಲೆ ಸೃಷ್ಟಿಸಿದರು.
ಶ್ವಾಸಯೋಗ ಸಂಸ್ಥೆ ಕೇಂದ್ರ ಆಯುಷ್ ಇಲಾಖೆ, ಮಹಾಬೋಧಿ ಅಂತರಾಷ್ಟ್ರೀಯ ಧ್ಯಾನ ಕೇಂದ್ರದ ಸಹಯೋಗದಲ್ಲಿ ಶ್ವಾಸಗುರು ವಚನಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಲೇಹ್ ಲಡಾಕ್‌ನ ಪ್ಯಾಂಗಾಂಗ್ ಸರೋವರ ತಟದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ರಾಜ್ಯಾದ್ಯಂತ ಶನಿವಾರ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸೇರಿ ವಿವಿಧ ಸಂಘ-ಸಂಸ್ಥೆಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಐದು ಲಕ್ಷ ಮಂದಿ ಭಾಗಿಯಾಗಲಿದ್ದಾರೆ.